BengaluruPolitics

ಗುತ್ತಿಗೆದಾರರ ಶೇ.70ರಷ್ಟು ಬಿಲ್‌ ರಿಲೀಸ್‌; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಬಿಬಿಎಂಪಿ ಗುತ್ತಿಗೆದಾರರ ಬಿಲ್‌ ಅನ್ನು ಶೇಕಡಾ 65 ರಿಂದ 70ರಷ್ಟು ರಿಲೀಸ್‌ ಮಾಡಲು ಆದೇಶ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಈ ಬಗ್ಗೆ ತನಿಖೆ ನಡೆಯುತ್ತಿದ್ದರೂ ಕೂಡಾ ಬಹುತೇಕ ಬಿಲ್‌ ಅನ್ನು ಬಿಡುಗಡೆಗೆ ಆದೇಶಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಕೆಂಪಣ್ಣ ಸುದ್ದಿಗೋಷ್ಠಿ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್‌, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಾಬರಿಪಡುವ ಅಗತ್ಯವಿಲ್ಲ.  ಗುತ್ತಿಗೆದಾರರಿಗೆ ಸಹಾಯ ಆಗಬೇಕು ಅಂತಾನೇ ಬಿಲ್‌ ರಿಲೀಸ್‌ಗೆ ಆದೇಶ ಮಾಡಿದ್ದೇವೆ ಎಂದು ಹೇಳಿದ್ದಾರೆ.

 

Share Post