BengaluruPolitics

ದಾಖಲೆ ಇದ್ದರೆ ಕೊಡಲಿ, ಸುಮ್ಮನೆ ಆರೋಪ ಮಾಡಬಾರದು; ಡಿ.ಕೆ.ಶಿವಕುಮಾರ್‌

ಬೆಂಗಳೂರು; ವರ್ಗಾವಣೆ ದಂಧೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಮಾಡಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಅವರು, ಆರೋಪ ಮಾಡುವುದಲ್ಲ. ದಾಖಲೆ ಇದ್ದರೆ ಕೊಡಲಿ ಎಂದು ಸವಾಲು ಹಾಕಿದರು.

ಅವರು ಅವರ ರಾಜಕಾರಣ ಮಾಡಲಿ ಬಿಡಲಿ. ನಾವು ನಮ್ಮ ರಾಜಕಾರಣ ಮಾಡುತ್ತೇವೆ ಎಂದೂ ಡಿ.ಕೆ.ಶಿವಕುಮಾರ್‌ ಹೇಳಿದರು. ಕುಮಾರಸ್ವಾಮಿಯವರು ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ಕೋಟಿ ಕೋಟಿಗೆ ಕೆಲ ಹುದೆಗಳು ಬಿಕರಿಯಾಗುತ್ತಿವೆ ಎಂದು ಆರೋಪಿಸಿದ್ದರು. ಇದಕ್ಕೆ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದರು.

Share Post