Bengaluru

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು; ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪಿಯು ಬೋರ್ಡ್‌ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.  ಈ ಬಾರಿ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ಗಳಿಗೆ ಮೆಸೇಜ್‌ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಏಪ್ರಿಲ್ 2022ರಿಂದ ಮೇ 18 ದ್ವಿತೀಯ ಪಿಯುಸಿ ಪರೀಕ್ಷೆ ಕರ್ನಾಟಕ ರಾಜ್ಯದಾದ್ಯಂತ ನಡೆದಿತ್ತು. ಒಟ್ಟು 6,84,255 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಅವರಲ್ಲಿ -3,46,936 ವಿದ್ಯಾರ್ಥಿಗಳು, 3,37,319 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ ರೆಗ್ಯುಲರ್ ವಿದ್ಯಾರ್ಥಿಗಳು 6,00,519, ಪುನರಾವರ್ತಿತ ವಿದ್ಯಾರ್ಥಿಗಳು 61,808, ಖಾಸಗಿ ವಿದ್ಯಾರ್ಥಿಗಳು 21,928 ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

Share Post