Bengaluru

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಶೇ.61.88 ತೇರ್ಗಡೆ

ಬೆಂಗಳೂರು; ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಮಧ್ಯಾಹ್ನ 1 ಗಂಟೆಗೆ ಪಿಯು ಬೋರ್ಡ್‌ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ. ಇಂದು ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, ಫಲಿತಾಂಶವನ್ನು ಪ್ರಕಟಿಸಿದರು. 

ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ಒಟ್ಟು 61.88ರಷ್ಟು ಫಲಿತಾಂಶ ಬಂದಿದೆ. 5,99,794 ಮಂದಿ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದು, ಇದರಲ್ಲಿ 4,02,697 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಪಾಸ್‌ ಆಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ ಎಂದು ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

 

Share Post