Bengaluru

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ

ಬೆಂಗಳೂರು; ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಒಟ್ಟಾರೆ 74.67ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಎಂದಿನಂತೆ ವಿದ್ಯಾರ್ಥಿನಿಯೇ ಮೇಲುಗೈ ಸಾಧಿಸಿದ್ದಾರೆ. ಶೇ.80.25ರಷ್ಟು ವಿದ್ಯಾರ್ಥಿನಿಯರು ಈ ಬಾರಿ ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ.

7,02,067 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದರು. ಇದರಲ್ಲಿ 5,24,209 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಬಾಲಕಿಯರು 80.25 ರಷ್ಟು ಮಂದಿ ತೇರ್ಗಡೆಯಾಗಿದ್ದರೆ, ಬಾಲಕರು 69.05 ರಷ್ಟು ಮಂದಿ ಪಾಸಾಗಿದ್ದಾರೆ. ಈ ಬಾರಿ ಗ್ರಾಮೀಣ ಭಾಗದಲ್ಲಿ ಹೆಚ್ಚು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಗ್ರಾಮೀಣ ಭಾಗದಲ್ಲಿ 74.79 ರಷ್ಟು ಫಲಿತಾಂಶ ಬಂದಿದ್ದರೆ, ನಗರ ಭಾಗದಲ್ಲಿ 74.63ರಷ್ಟು ಫಲಿತಾಂಶ ಬಂದಿದೆ.

95.33ರಷ್ಟು ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನದಲ್ಲಿದೆ. 95.24 ರಷ್ಟು ಫಲಿತಾಂಶ ಪಡೆದಿರುವ ಉಡುಪಿ ಎಡರನೇ ಸ್ಥಾನ ಹಾಗೂ 90.55 ರಷ್ಟು ಫಲಿತಾಂಶ ಪಡೆದಿರುವ ಕೊಡಗು ಮೂರನೇ ಸ್ಥಾನದಲ್ಲಿದೆ. ಯಾದಗಿರಿ ಜಿಲ್ಲೆಯಲ್ಲಿ ಶೇ.78.97 ಮಂದಿ ಪಾಸಾಗಿದ್ದು, ಫಲಿತಾಂಶದಲ್ಲಿ ಕೊನೆಯ ಸ್ಥಾನ ಗಳಿಸಿದೆ.

Share Post