BengaluruCrime

ವ್ಯವಹಾರದಲ್ಲಿ ಅಕ್ರಮ ಆರೋಪ; ಮಂತ್ರಿ ಗ್ರೂಪ್‌ ಎಂಡಿ ಬಂಧಿಸಿದ ಇಡಿ ಅಧಿಕಾರಿಗಳು

ಬೆಂಗಳೂರು; ಮಂತ್ರಿಗ್ರೂಪ್‌ ಎಂಡಿ ಸುಶೀಲ್‌ ಪಾಂಡುರಂಗ್‌ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.  ನಿನ್ನೆ ಇಡಿ ಅಧಿಕಾರಿಗಳ ವಿಚಾರಣೆ ಎದುರಿಸಿದ್ದ ಸುಶೀಲ್‌ ಅವರನ್ನು ಇಂದು ಬಂಧಿಸಲಾಗಿದೆ. ಇಡಿ ಅಧಿಕಾರಿಗಳು ಸುಶೀಲ್‌ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗೆ ವಶಕ್ಕೆ ಕೇಳಿದ್ದಾರೆ ಎಂದು ತಿಳಿದುಬಂದಿದೆ.

ವ್ಯವಹಾರದಲ್ಲಿ ಅನೇಕ ಅಕ್ರಮಗಳು ನಡೆದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಹಲವು ಅಕ್ರಮಗಳು ಕಂಡುಬಂದಿದ್ದವು. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಖಲೆ ಸಮೇತ ಜಾರಿ ನಿರ್ದೇಶನಾಲಯಕ್ಕೆ ವರದಿ ಸಲ್ಲಿಸಿದ್ದರು. ಇದರ ಆಧಾರದ ಮೇಲೆ ಇಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಸುಶೀಲ್‌ ಪಾಂಡುರಂಗ ಅವರನ್ನು ಬಂಧಿಸಿದ್ದಾರೆ.

 

Share Post