BengaluruCrime

ಅಕ್ರಮ ಚಿನ್ನ ಸಾಗಾಟ; ವಿಮಾನ ನಿಲ್ದಾಣದಲ್ಲಿ 30 ಚಿನ್ನದ ಬಿಸ್ಕೆಟ್‌ ವಶ..!

ದೇವನಹಳ್ಳಿ; ಅಕ್ರಮವಾಗಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿದ್ದಾನೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ವ್ಯಕ್ತಿಯೊಬ್ಬ ಕೋಲ್ಕತ್ತಾದಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನದ ಬಿಸ್ಕೆಟ್‌ಗಳನ್ನು ತಂದಿದ್ದ. ಪರಿಶೀಲನೆ ವೇಳೆ ಸಿಕ್ಕಿಬಿದ್ದಿದ್ದು, ಆತನಿಂದ ಸುಮಾರು 30 ಚಿನ್ನದ ಬಿಸ್ಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇವು ಸುಮಾರು 600 ಗ್ರಾಂ ತೂಕವಿದ್ದು, 36 ಲಕ್ಷ ರೂಪಾಯಿ ಬೆಲೆಬಾಳುತ್ತವೆ ಎಂದು ಅಂದಾಜಿಸಲಾಗಿದೆ.

ಈ ಚಿನ್ನ ತಂದೆ ವ್ಯಕ್ತಿಯನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

Share Post