Bengaluru

ಶಾಲಾ-ಕಾಲೇಜುಗಳಲ್ಲಿ ನಿತ್ಯ ಹತ್ತು ನಿಮಿಷ ಧ್ಯಾನ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸೂಚನೆ

ಬೆಂಗಳೂರು; ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿದಿನ ಹತ್ತು ನಿಮಿಷ ಧ್ಯಾನ ಮಾಡಿಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು ಹಾಗೂ ಒತ್ತಡದಿಂದ ದೂರ ಮಾಡಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ವಿದ್ಯಾರ್ಥಿಗಳ ಧ್ಯಾನ ಮಾಡುವಂತೆ ಸೂಚಿಸಿ ಆದೇಶ ಹೊರಡಿಸುವಂತೆ ಶಿಕ್ಷಣ ಸಚಿವರು ಆದೇಶ ಹೊರಡಿಸಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಣ ಸಂಘದವರು ಶಾಲಾ-ಕಾಲೇಜುಗಳಲ್ಲಿ ಧ್ಯಾನ ಮಾಡಿಸುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆದಿದ್ದರು. ಹೀಗಾಗಿ ಸಚಿವರು ಈ ಸೂಚನೆ ನೀಡಿದ್ದು, ಶೀಘ್ರದಲ್ಲೇ ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.

Share Post