BengaluruHealth

ಕೊವಿಡ್‌ ಪ್ರಕರಣಗಳ ಹೆಚ್ಚಳ ಹಿನ್ನೆಲೆ; ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು; ಕೊವಿಡ್‌ ಪಾಸಿಟಿವ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ರಾಜ್ಯದಲ್ಲಿ ಕೊವಿಡ್‌ ಹರಡದಂತೆ ತಡೆಯಲು ರಾಜ್ಯ ಮಾರ್ಗಸೂಚಿ ಪ್ರಕಟ ಮಾಡಿದೆ. ಅರವತ್ತು ವರ್ಷ ಮೇಲ್ಪಟ್ಟವರಿಗೆ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಮಾರ್ಗಸೂಚಿಯಲ್ಲಿ ಏನೆಲ್ಲಾ ಅಂಶಗಳಿವೆ ನೋಡಿ..

 

ಕೋವಿಡ್ ಮಾರ್ಗಸೂಚಿಯಲ್ಲಿ ಏನೇನಿದೆ?

  • ಕೇರಳ, ತಮಿಳುನಾಡು ರಾಜ್ಯಗಳ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ
  • ಕೊವಿಡ್‌ ನಿರ್ಬಂಧ ಅವಶ್ಯಕತೆ ಇಲ್ಲ
  • ಗಡಿ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆಗಳನ್ನು ಹೆಚ್ಚಿಸಬೇಕು
  • ಗಡಿ ಜಿಲ್ಲೆಗಳ ಕೋವಿಡ್ ಪರೀಕ್ಷಾ ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಲು ಜಿಲ್ಲಾಡಳಿತಗಳಿಗೆ ಸೂಚನೆ
  • ತೀವ್ರ ಶ್ವಾಸಕೋಶ, ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು
  • ರೋಗ ಲಕ್ಷಣ ಇರುವವರನ್ನು ಕೊವಿಡ್‌ ಪರಿಶೀಲನೆಗೆ ಒಳಪಡಿಸಬೇಕು
  • ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪನೆಗೆ ಸೂಚನೆ
  • ಡಿ.3, 4ನೇ ವಾರದಲ್ಲಿ ಮಾಕ್ ಡ್ರಿಲ್‌ ಮುಕ್ತಾಯಗೊಳಿಸಲು ಸೂಚನೆ
  • ಎಲ್ಲಾ ಹಿರಿಯ ನಾಗರೀಕರು, ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು.
  • ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತ.
  • ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು.
  • ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ
  • ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ
  • ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು.
  • ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ
  • ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ ಧರಿಸುವುದು ಹೆಚ್ಚಿನ ಗಾಳಿ-ಬೆಳಕು ಇಲ್ಲವ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.
Share Post