ವರುಣಾದಲ್ಲಿ ಸ್ಪರ್ಧೆ ವರಿಷ್ಠರು ತೀರ್ಮಾನಿಸ್ತಾರೆ; ಬಿ.ವೈ.ವಿಜಯೇಂದ್ರ
ಬೆಂಗಳೂರು; ವರುಣಾದಲ್ಲಿ ಸ್ಪರ್ಧೆ ಬಗ್ಗೆ ವರಿಷ್ಠರು ತೀರ್ಮಾನ ಮಾಡ್ತಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಶಿಕಾರಿಪುರದಲ್ಲಿ ಓಡಾಡುತ್ತಿದ್ದೇನೆ. ಈಗಾಗಲೇ ಒಂದು ಸುತ್ತು ಓಡಾಟ ಮಾಡಿದ್ದೇನೆ ಎಂದು ಹೇಳಿದ್ದಾರೆ.
ನಾನು ಶಿಕಾರಿಪುರದಲ್ಲಿ ಸಂಘಟನೆ ಮಾಡುತ್ತಿದ್ದೇನೆ. ವರುಣಾದಲ್ಲಿ ನನ್ನನ್ನು ಕಣಕ್ಕಿಳಿಸುವುದು, ಬಿಡುವುದರ ಬಗ್ಗೆ ಕೇಂದ್ರದ ನಾಯಕರು ತೀರ್ಮಾನ ಮಾಡುತ್ತಾರೆ ಎಂದು ವಿಜಯೇಂದ್ರ ಹೇಳಿದ್ದರು. ಜೊತೆಗೆ ಪಕ್ಷದಲ್ಲಿ ಯಾವುದೇ ಕಾರಣಕ್ಕೂ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲು ಸಾಧ್ಯವಿಲ್ಲ ಎಂದೂ ಸ್ಪಷ್ಟನೆ ನೀಡಿದ್ದಾರೆ.