Bengaluru

ಕೆಆರ್‌ ಪುರಂ-ವೈಟ್‌ಫೀಲ್ಡ್‌ ಮೆಟ್ರೋ ಮಾರ್ಗ ಉದ್ಘಾಟನೆ; ಮೆಟ್ರೋದಲ್ಲಿ ಸಂಚರಿಸಿದ ಮೋದಿ

ಬೆಂಗಳೂರು; ಪ್ರಧಾನಿ ನರೇಂದ್ರ ಮೋದಿಯವರು ಇಂದು ಕೆಆರ್​ಪುರ ಮತ್ತು ವೈಟ್‌ಫೀಲ್ಡ್ ನಡುವಿನ ಮೂರನೆಯ ಹಂತದ 13.71 ಕಿಲೋಮೀಟರ್ ಮೆಟ್ರೋ ಮಾರ್ಗವನ್ನು ಉದ್ಘಾಟನೆ ಮಾಡಿದ್ದಾರೆ. ಈ ಹೊಸ ಮಾರ್ಗ 12 ನಿಲ್ದಾಣಗಳನ್ನು ಒಳಗೊಂಡಿದ್ದು, ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ. ಪ್ರಧಾನಿ ಮೋದಿಯವರು ನಮ್ಮ ಮೆಟ್ರೋದಲ್ಲಿ ಸಂಚರಿಸಿ, ಮೆಟ್ರೋ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು.

ವೈಟ್‌ಫೀಲ್ಡ್, ಚನ್ನಸಂದ್ರ, ಕಾಡುಗೋಡಿ, ಪಟ್ಟಂದೂರು ಅಗ್ರಹಾರ, ಶ್ರೀ ಸತ್ಯ ಸಾಯಿ ಆಸ್ಪತ್ರೆ, ನಲ್ಲೂರ ಹಳ್ಳಿ, ಕುಂದನಹಳ್ಳಿ, ಸೀತಾರಾಮ ಪಾಳ್ಯ, ಹೂಡಿ ಜಂಕ್ಷನ್, ಗರುಡಾಚಾರ್ ಪಾಳ್ಯ, ಮಹದೇವಪುರ ಮತ್ತು ಕೆಆರ್ ಪುರಂ ನಿಲ್ದಾಣ ಸೇರಿದಂತೆ 12 ಮೆಟ್ರೋ ನಿಲ್ದಾಣಗಳು ಈ ಮಾರ್ಗದಲ್ಲಿ ಬರಲಿವೆ.

Share Post