BengaluruPolitics

ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆ; ರಾಜ್ಯದಲ್ಲಿ ಮೋದಿ ಹವಾ

ಬೆಂಗಳೂರು; ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನ ಮಂತ್ರಿ ನರೇಂದ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ. ಈಗ ಅವರು ಚಿಕ್ಕಬಳ್ಳಾಪುರದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಇದಾದ ಮೇಲೆ ಅವರು ಬೆಂಗಳೂರು ವೈಟ್ ಫೀಲ್ಡ್ (ಕಾಡುಗೋಡಿ) ನಿಂದ ಕೃಷ್ಣರಾಜಪುರ ಮೆಟ್ರೋ ಮಾರ್ಗದ ಉದ್ಘಾಟನೆ ನೆರವೇರಿಸಲಿದ್ದಾರೆ.

ಇದಕ್ಕೂ ಮೊದಲು ಮೋದಿಯವರು ಇಂದು ಬೆಳಿಗ್ಗೆ ಹೆಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ಆಗಮಿಸಿದರು.  ಪ್ರಧಾನ ಮಂತ್ರಿಗಳನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವರಾದ ವಿ. ಸೋಮಣ್ಣ, ಶಾಸಕರಾದ ಸುರೇಶ್ ಕುಮಾರ್, ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ ಇನ್ನಿತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Share Post