ಮಣಿಪಾಲ ಸಮೂಹ ಸಂಸ್ಥೆಗಳಿಗೆ ಬೆಳ್ಳಂಬೆಳಗ್ಗೆ ಐಟಿ ಶಾಕ್
ಬೆಂಗಳೂರು; ಮಣಿಪಾಲ ಸಮೂಹ ಸಂಸ್ಥೆಗಳಿಗೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರು, ಮಣಿಪಾಲ ಸೇರಿದಂತೆ ದೇಶದ ೨೨ ಕಡೆಗಳಲ್ಲಿ ಐಟಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಣಿಪಾಲ್ ಗ್ರೂಪ್ ನ ಸಂಸ್ಥೆಗಳು ಹಾಗೂ ಉಡುಪಿ ಜಿಲ್ಲೆ ಮಣಿಪಾಲದಲ್ಲೂ ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ. ಮಣಿಪಾಲ ಗ್ರೂಪ್ ನ ಫೈನಾನ್ಸ್ ವಿಭಾಗದಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಬೆಂಗಳೂರು ಮತ್ತು ಮಂಗಳೂರು ನಿಂದ ಕಾರು ಬಾಡಿಗೆ ಪಡೆದು ಬಂದಿದ್ದಾರೆ. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.