BengaluruCrime

ಅಕ್ರಮ ಆಸ್ತಿ ಗಳಿಕೆ ಆರೋಪ; ಸೋಮಣ್ಣ ವಿರುದ್ಧ ತನಿಖೆಗೆ ಸೂಚನೆ

ಬೆಂಗಳೂರು; ಆದಾಯ ಮೀರಿ ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆಂಬ ಆರೋಪ ಪ್ರಕರಣ ಸಂಬಂಧ ವಸತಿ ಸಚಿವ ವಿ. ಸೋಮಣ್ಣ ವಿರುದ್ಧ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚಿಸಿದೆ. ಈ ಬಗ್ಗೆ ವರದಿ ನೀಡುವಂತೆ ಹೇಳಿದೆ.

  ರಾಮಕೃಷ್ಣ ಎಂಬುವವರು ಸಲ್ಲಿಸಿರುವ ದೂರಿನ ಹಿನ್ನೆಲೆಯಲ್ಲಿ ಮರು ವಿಚಾರಣೆ ನಡೆಸುವಂತೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ, ಈ ಬಗ್ಗೆ ತನಿಖೆ ನಡೆಸಿ ೨ ತಿಂಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದೆ.

 ರಾಮಕೃಷ್ಣ ಎಂಬುವವರು 2012ರಲ್ಲಿ ಸಚಿವ ಸೋಮಣ್ಣ ವಿರುದ್ಧ ಅಕ್ರಮ ಆಸ್ತಿ ಮಾಡಿದ್ದಾರೆಂದು ಆರೋಪಿಸಿದ್ದರು. ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಆರೋಪದಲ್ಲಿ ಹುರಳಿಲ್ಲ ಎಂದು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದ್ರೆ ರಾಮಕೃಷ್ಣ ಅವರು ಇದನ್ನು ಪ್ರಶ್ನಿಸಿ ಹೈಕೋರ್ಟ್‌ ಬಾಗಿಲು ತಟ್ಟಿದ್ದರು.

Share Post