BengaluruCinema

ರಶ್ಮಿಕಾ-ವಿಜಯ್‌ ದೇವರಕೊಂಡ ಡೇಟಿಂಗ್‌ ನಿಜಾನಾ..?; ಸಿಕ್ತು ಸಾಕ್ಷ್ಯ

ಹೈದರಾಬಾದ್;‌ ನ್ಯಾಷನಲ್‌ ಕ್ರಶ್‌ ಎಂದೇ ಖ್ಯಾತಿ ಪಡೆದಿರುವ ನಟಿ ರಶ್ಮಿಕಾ ಮಂದಣ್ಣ ಹಾಗೂ ಖ್ಯಾತ ತೆಲುಗು ನಟ ವಿಜಯ್‌ ದೇವರಕೊಂಡ ಡೇಟಿಂಗ್‌ನಲ್ಲಿದ್ದಾರೆ ಎಂಬ ಸುದ್ದಿ ಹಲವಾರು ದಿನಗಳಿಂದ ಇತ್ತು. ಆದ್ರೆ ಇಬ್ಬರೂ ನಮ್ಮಿಬ್ಬರ ನಡುವೆ ಏನೂ ಇಲ್ಲ ಎಂದು ಹೇಳುತ್ತಲೇ ಬಂದಿದ್ದರು. ಹೀಗಾಗಿ ಇತ್ತೀಚೆಗೆ ಈ ಸುದ್ದಿ ಮರೆಯಾಗಿತ್ತು. ಆದ್ರೆ ಈಗ ಮತ್ತೆ ಇವರಿಬ್ಬರೂ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬುದಕ್ಕೆ ಸಾಕ್ಷ್ಯವೊಂದು ಸಿಕ್ಕಿದೆ. ಹೀಗಾಗಿ, ಮತ್ತೆ ಈ ಸುದ್ದಿ ಮುನ್ನೆಲೆಗೆ ಬಂದಿದೆ.

ಗೀತ ಗೋವಿಂದಂ ಸಿನಿಮಾದಲ್ಲಿ ಇಬ್ಬರ ಪರಿಚಯವಾಗಿತ್ತು. ಈ ಚಿತ್ರದಲ್ಲಿ ಕಿಸ್ಸಿಂಗ್‌ ಸೀನ್‌ ಕೂಡಾ ಇದೆ. ಈ ಚಿತ್ರದ ನಂತರ ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ನಡುವೆ ಪ್ರೇಮಾಂಕುರವಾಗಿದೆ ಎಂದು ಹೇಳಲಾಗುತ್ತಿತ್ತು. ಈಗ ಅದು ನಿಜ ಎಂದು ಹೇಳಲಾಗುತ್ತಿದೆ. ಯಾಕಂದ್ರೆ ಇಬ್ಬರೂ ಇತ್ತೀಚೆಗೆ ರೆಸ್ಟೋರೆಂಟ್‌ ಒಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅಲ್ಲಿ ಇಬ್ಬರ ಕುಟುಂಬದವರೂ ಇದ್ದರು ಅನ್ನೋದು ವಿಶೇಷ.

Share Post