BengaluruPolitics

ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣವಾ..?; ಮಾಜಿ ಸಚಿವ ಸುಧಾಕರ್‌ ಹೇಳ್ತಿರೋದೇನು..?

ಬೆಂಗಳೂರು; ಸ್ಪಷ್ಟ ಬಹುಮತ ಬಂದ ಮೇಲೂ ಕಾಂಗ್ರೆಸ್‌ ರಾಜ್ಯದಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದೆ. ಸಿಎಂ ಯಾರಾಗಬೇಕು ಎಂಬುದರ ಬಗ್ಗೆ ಹೈಕಮಾಂಡ್‌ ನಾಯಕರು ತಲೆ ಕೆಡಿಸಿಕೊಂಡಿದ್ದಾರೆ. ಈ ನಡುವೆ ಮಾಜಿ ಸಚಿವ ಡಾ.ಕೆ.ಸುಧಾಕರ್‌ ಅವರು ಸಿದ್ದರಾಮಯ್ಯ ವಿರುದ್ಧ ಬಾಂಬ್‌ ಸಿಡಿಸಿದ್ದಾರೆ. 2018ರ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಅವರೇ ಕಾರಣ ಎಂಬ ರೀತಿಯಲ್ಲಿ ಹೇಳಿಕೆ ದಾಖಲಿಸಿದ್ದಾರೆ. ಈ ಬಗ್ಗೆ ಸುಧಾಕರ್‌ ಅವರು ಟ್ವೀಟ್‌ ಮಾಡಿದ್ದಾರೆ.

ಸುಧಾಕರ್‌ ಮಾಡಿರುವ ಟ್ವೀಟ್‌ನಲ್ಲಿ ಏನಿದೆ..?
ʻ2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನೂ ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. 2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.

ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು ಎಂದು ಮಾಜಿ ಸಚಿವ ಸುಧಾಕರ್‌ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

Share Post