ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸುವಂತೆ ಜಾಗೃತಿ; ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ಅಭಿಯಾನ
ಬೆಂಗಳೂರು: ದ್ವಿಚಕ್ರ ವಾಹನ ಸವಾರರು ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸುವಂತೆ ಪ್ರೇರೇಪಿಸಲು ಬೆಂಗಳೂರು ಟ್ರಾಫಿಕ್ ಪೊಲೀಸರು ರಸ್ತೆ ಸುರಕ್ಷತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಇದರ ಭಾಗವಾಗಿ ಇಂದು ಬಾಣಸವಾಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಸುರಕ್ಷತಾ ಕಾರ್ಯಕ್ರಮ ನಡೆಯಿತು.
ದ್ವಿಚಕ್ರ ವಾಹನ ಸವಾರರಿಗೆ ISI ಮಾರ್ಕ್ ಹೊಂದಿರುವ ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸುವಂತೆ ಹಾಗೂ ಕಳಪೆ ದರ್ಜೆಯ ಸುರಕ್ಷಿತವಲ್ಲದ ಹೆಲ್ಮೆಟ್ ಗಳನ್ನು ಧರಿಸದಂತೆ ಮನವರಿಕೆ ಮಾಡಿಕೊಡಲಾಯಿತು. ಗುಣಮಟ್ಟದ ಹೆಲ್ಮೆಟ್ ಏಕೆ ಅವಶ್ಯಕ ಎಂಬುದರ ಬಗ್ಗೆ ಸವಾರರಿಗೆ ತಿಳಿಸಲಾಯಿತು. ಸಂಚಾರ ನಿಯಮಗಳನ್ನು ಪಾಲಿಸುವ ಬಗ್ಗೆಯೂ ಸವಾರರಿಗೆ ಮನವರಿಕೆ ಮಾಡಿಕೊಡಲಾಯಿತು.