BengaluruPolitics

ಬಿಜೆಪಿಯಲ್ಲಿ ಸ್ವಾಭಿಮಾನಕ್ಕೆ ಧಕ್ಕೆಯಾದವರು ಕಾಂಗ್ರೆಸ್‌ಗೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಬಿಜೆಪಿಯಲ್ಲಿ ಹಲವಾರು ನಾಯಕರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಈ ಕಾರಣಕ್ಕಾಗಿ ಅವರೆಲ್ಲಾ ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶೆಟ್ಟರ್‌ ಅವರು ಕಾಂಗ್ರೆಸ್‌ ಸೇರಿದ್ದಾರೆ. ಅವರು ಯಾವುದೇ ಕಂಡೀಷನ್‌ ಹಾಕದೆ ಕಾಂಗ್ರೆಸ್‌ಗೆ ಬಂದಿದ್ದಾರೆ. ಲಿಂಗಾಯತರಿಗೆ ಬಿಜೆಪಿ ಮೋಸ ಮಾಡಿದ್ದು, ಇಡೀ ಲಿಂಗಾಯತ ಸಮುದಾಯವೇ ಕಾಂಗ್ರೆಸ್‌ಗೆ ಬರುತ್ತಿದೆ ಎಂದರು. ಈ ಬಾರಿ ನಾವು 150 ಸೀಟು ಗೆಲ್ಲಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

Share Post