Bengaluru

ಉದ್ಯಮಿಗಳ ಮನೆ ಮೇಲೆ ಐಟಿ ರೇಡ್‌; 50ಕ್ಕೂ ಹೆಚ್ಚು ಕಡೆ ಪರಿಶೀಲನೆ

ಬೆಂಗಳೂರು; ರಾಜ್ಯದ ಉದ್ಯಮಿಗಳಿಗೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ರಾಜ್ಯದ 50ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಐಟಿ ರಿಟರ್ನ್ಸ್‌ ಸಲ್ಲಿಸದೆ ಆದಾಯ ಮರೆಮಾಚಿದ ಅನುಮಾನದ ಹಿನ್ನೆಲೆಯಲ್ಲಿ ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ.  ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿನ ಅನೇಕ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ. 600ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಈ ದಾಳಿಯಲ್ಲಿ ಪಾಲ್ಗೊಂಡಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆಸಿದ ನಾಲ್ವರು ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಒಟ್ಟಾರೆಯಾಗಿ ಬೆಂಗಳೂರಿನಲ್ಲಿಯೇ 37 ಕಡೆ ಐಟಿ ದಾಳಿ ನಡೆಸಿದ್ದಾರೆ.

ಐಟಿ ರಿಟರ್ನ್ಸ್‌ ಸಲ್ಲಿಕೆಗಿಂತ ಹೆಚ್ಚಿನ ಆದಾಯ ಹೊಂದಿರುವವರನ್ನು ಪತ್ತೆ ಮಾಡಿ ಈ ದಾಳಿ ನಡೆಸಿದ್ದಾರೆ. ಮನೆಗಳ ಮೇಲೆ ಸರ್ಚ್ ವಾರೆಂಟ್ ತಂದು ಐಟಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ. ಗೋವಾ, ಕರ್ನಾಟಕದ ಆದಾತ ತೆರಿಗೆ ಇಲಾಖೆ ಅಧಿಕಾರಿಗಳ ತಂಡದಿಂದ ಈ ದಾಳಿ ನಡೆಸಲಾಗಿದೆ.

 

 

 

Share Post