ತವರು ಸೇರಿದ ಜಗದೀಶ್ ಶೆಟ್ಟರ್; ಡಿ.ಕೆ.ಶಿವಕುಮಾರ್‌ಗೆ ಖರ್ಗೆ ಎಚ್ಚರಿಕೆ ಕೊಟ್ರಾ..?
ಬೆಂಗಳೂರು; ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಆರು ತಿಂಗಳ ಹಿಂದಷ್ಟೇ ಕಾಂಗ್ರೆಸ್ ಸೇರಿದ್ದರು. ಅದಾಗಲೇ ಅವರು ಪಕ್ಷ ತೊರೆದು ತವರು ಪಕ್ಷ ಬಿಜೆಪಿಗೆ ಮರಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ತೊಂದರೆಯಾಗದಿದ್ದರೂ ಕೂಡಾ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಇದರಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗರಂ ಆಗಿದ್ದಾರೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಬಹಿರಂಗವಾಗಿಯೇ ಖರ್ಗೆ ಎಚ್ಚರಿಕೆ ಕೊಟ್ಟಿದ್ದಾರೆ. ಯಾರನ್ನಾದರೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮುನ್ನ ಯೋಚನೆ ಮಾಡಬೇಕು, ಹೀಗೆ ಬಂದು ಹೋಗುವವರ ಬಗ್ಗೆ ಎಚ್ಚರಿಕೆ ಇರಬೇಕು ಎಂದು ಹೇಳಿದ್ದಾರೆ.
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಲು ಮಲ್ಲಿಕಾರ್ಜುನ ಖರ್ಗೆ ಆಗಮಿಸಿದ್ದರು. ಕಾರ್ಯಕ್ರಮಕ್ಕೂ ಮುನ್ನ ಮಲ್ಲಿಕಾರ್ಜುನ ಖರ್ಗೆ ಅವರು ಡಿ.ಕೆ.ಶಿವಕುಮಾರ್‌ಗೆ ಎಚ್ಚರಿಕೆ ಕೊಟ್ಟಿದ್ದಾರೆ. ಬೇರೆ ಪಕ್ಷದಿಂದ ಬರುವವರು ಹಾಗೆ ಬಂದು ಹಾಗೇ ಹೋದರೆ ಪಕ್ಷಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ, ಬರುವವರು ಪಕ್ಷದಲ್ಲಿ ಎಷ್ಟು ದಿನ ಇರಬಹುದು, ಅವರು ನಮ್ಮ ಪಕ್ಷದಿಂದ ಸಿದ್ಧಾಂತ ಒಪ್ಪಿದ್ದಾರಾ..? ನಮ್ಮ ಪಕ್ಷದ ಸಿದ್ಧಾಂತಕ್ಕೆ ಒಗ್ಗಿಕೊಳ್ಳುತ್ತಾರಾ ಎಂದು ನೋಡಿಕೊಂಡು ಪಕ್ಷಕ್ಕೆ ಬರಮಾಡಿಕೊಳ್ಳಬೇಕು. ನಿಷ್ಠಾವಂತರು ಮಾತ್ರ ನಮಗೆ ಸಾಕು ಎಂದು ಖರ್ಗೆ ಹೇಳಿದ್ದಾರೆ.
ಇನ್ನು ಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿರುವ ಖರ್ಗೆಯವರು, ಸಂವಿಧಾನವನ್ನು ತಿರುಚುವ ಕುತಂತ್ರವನ್ನು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಮಾಡುತ್ತಿವೆ. ಸ್ವಾಯತ್ತ ಸಂಸ್ಥೆಗಳನ್ನು ಬಿಜೆಪಿ ನಾಶ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.