Bengaluru

ಮಾಜಿ ಸಚಿವ ಎಂ.ರಘುಪತಿ ನಿಧನ; ನಾಳೆ ಅಂತ್ಯಕ್ರಿಯೆ

ಬೆಂಗಳೂರು; ಒಂದು ಕಾಲದಲ್ಲಿ ಜನತಾ ಪರಿವಾರದ  ಪ್ರಭಾವಿ ನಾಯಕರಾಗಿದ್ದ, ಮಾಜಿ ಶಿಕ್ಷಣ ಸಚಿವ ಎಂ.ರಘುಪತಿ (81) ಇಂದು ಮುಂಜಾನೆ ನಿಧನರಾದರು. ಒಂದು ವಾರದಿಂದ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ರಾಮಕೃಷ್ಣ ಹೆಗಡೆ ನೇತೃತ್ವದ ಜನತಾ ಪಕ್ಷದ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ್ದರು.

ಶಿವಾಜಿನಗರ, ಮಲ್ಲೇಶ್ವರ ವಿಧಾನಸಭಾ ಕ್ಷೇತ್ರಗಳಿಂದ ಆಯ್ಕೆಯಾಗಿದ್ದ ಅವರು, ಒಂದು ಬಾರಿ ವಿಧಾನ ಪರಿಷತ್ತಿನ ಸದಸ್ಯರಾಗಿದ್ದರು. ಇತ್ತೀಚಿನ ವರ್ಷಗಳಲ್ಲಿ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. ರಘುಪತಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ, ಮಲ್ಲೇಶ್ವರದಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದೆ. ಭಾನುವಾರ ಬೆಳಿಗ್ಗೆ ಮೃತರ ಅಂತ್ಯಕ್ರಿಯೆ ನಡೆಯಲಿದೆ.

Share Post