Bengaluru

ನಿವೃತ್ತ ಸಶಸ್ತ್ರ ಪಡೆ ಸಿಬ್ಬಂದಿಗಾಗಿ ಉದ್ಯೋಗ ಮೇಳ

ಬೆಂಗಳೂರು; ನಿವೃತ್ತ ಸಶಸ್ತ್ರ ಪಡೆ ಸಿಬ್ಬಂದಿಗಾಗಿ ನಾಳೆ ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಏರ್‌ಫೋರ್ಸ್‌ ಸ್ಟೇಷನ್‌ನಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಭಾರತೀಯ ಕೈಗಾರಿಕೆಗಳ ಒಕ್ಕೂಟದ (CII) ಸಹಯೋಗದೊಂದಿಗೆ HQTC, IAF ಮೂಲಕ ರಕ್ಷಣಾ ಸಚಿವಾಲಯದ ಆಶ್ರಯದಲ್ಲಿ ಈ ಉದ್ಯೋಗ ಮೇಳ ನಡೆಯುತ್ತಿದೆ.

ಸುಮಾರು 50ಕ್ಕೂ ಹೆಚ್ಚು ಕಾರ್ಪೊರೇಟ್‌ ಸಂಸ್ಥೆಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ ಎಂದು ಆಯೋಜಕರು ತಿಳಿಸಿದ್ದಾರೆ. ನಿವೃತ್ತ ಸಶಸ್ತ್ರ ಪಡೆ ಸಿಬ್ಬಂದಿಗೆ ಸೂಕ್ತ ಉದ್ಯೋಗಾವಕಾಶಗಳನ್ನು ಒದಗಿಸುವ ಗುರಿಯನ್ನು ಈ ಸೆಮಿನಾರ್ ಹೊಂದಿದೆ. 37 ರಿಂದ 57 ವರ್ಷ ವಯಸ್ಸಿನ ನಿವೃತ್ತ ಸಶಸ್ತ್ರ ಪಡೆ ಸಿಬ್ಬಂದಿ ಇದರ ಸದುಪಯೋಗಪಡಿಸಿಕೊಳ್ಳಬಹುದು.

ಇಚ್ಛಿಸುವ ಅರ್ಜಿದಾರರು DGR ವೆಬ್‌ಸೈಟ್‌ನಿಂದ ಅರ್ಜಿ ನಮೂನೆಗಳನ್ನು https://dgrindia.gov.in ಇಲ್ಲಿ ಡೌನ್‌ಲೋಡ್ ಮಾಡಬಹುದು.

Share Post