Bengaluru

ಜುಲೈ 30ಕ್ಕೆ ಸಿಇಟಿ ಫಲಿತಾಂಶ; ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು; ಕಳೆದ ತಿಂಗಳು ನಡೆದಿದ್ದ ಸಿಇಟಿಯ ಫಲಿತಾಂಶವನ್ನು ಜುಲೈ 30 ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಂ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ನಡೆಸಲಾಗಿತ್ತು. ಅದರ ಫಲಿತಾಂಶ ಜುಲೈ 30ಕ್ಕೆ ನೀಡುತ್ತೇವೆ ಎಂದು ಹೇಳಿದ್ದಾರೆ.

ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ನಾಳೆ ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಸಚಿವರು ಹೇಳಿದ್ದಾರೆ.

Share Post