ದಸರಾದಲ್ಲಿ ಕನ್ನಡ ಪುಸ್ತಕ ಪ್ರದರ್ಶನ ರದ್ದು; ಹೆಚ್ಡಿಕೆ ಖಂಡನೆ
ಬೆಂಗಳೂರು; ನಾಡಹಬ್ಬ ದಸರಾ ಉತ್ಸವದಲ್ಲಿ ಈ ಬಾರಿ ಕನ್ನಡ ಪುಸ್ತಕ ಪ್ರದರ್ಶನ ಕೈಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರವನ್ನು ಕಟು ಶಬ್ದಗಳಲ್ಲಿ ಟೀಕೆ ಮಾಡಿದ್ದಾರೆ.
ʻಕನ್ನಡ ನಾಡಿನ ಶ್ರೀಮಂತ ಪರಂಪರೆ, ಸಾಹಿತ್ಯ, ಸಿರಿ ಸಂಪತ್ತಿನ ಹೆಗ್ಗುರುತು ನಾಡಹಬ್ಬ ಮೈಸೂರು ದಸರಾ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರದ ನೀತಿ ಅತ್ಯಂತ ಖಂಡನೀಯ. ಕನ್ನಡ ಭಾಷೆ, ಸಂಸೃತಿಯ ಕುರಿತು ಆಡಳಿತ ನಡೆಸುವವರ ದಿವ್ಯ ನಿರ್ಲಕ್ಷ್ಯ ಮಾತೃಭಾಷೆಗೆ ಮಾಡಿರುವ ಅಪಮಾನ ಮತ್ತು ದ್ರೋಹʼ ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಮೈಸೂರು ಸಾಂಸ್ಕೃತಿಕ ನಗರಿ. ದಸರಾ, ಜಗದ್ವಿಖ್ಯಾತ ಸಾಂಸ್ಕೃತಿಕ ಉತ್ಸವ. ಹೀಗಿದ್ದೂ ರಾಜ್ಯ ಬಿಜೆಪಿ ಸರ್ಕಾರ ಕನ್ನಡವನ್ನು ಧಿಕ್ಕರಿಸಿ ತನ್ನ ರಹಸ್ಯ ಕಾರ್ಯಸೂಚಿಯನ್ನು ಹೇರಲು ಹೊರಟಿದೆ. ಹಿಂದಿ ಭಾಷೆಯ ವಕ್ತಾರಿಕೆ ಮಾಡುವ ಬಿಜೆಪಿ ಪಕ್ಷದಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಎಂದೂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.