Bengaluru

ಸಿಎಂ ತವರು ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: 86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ನಿನ್ನೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 23, 24 ಹಾಗೂ 25 ರಂದು ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ.

ಸಮ್ಮೇಳನಕ್ಕೆ ಸಮಿತಿಗಳಲ್ಲಿ ಸಕ್ರಿಯವಾಗಿರುವ ಸ್ಥಳೀಯರನ್ನು ತೊಡಗಿಸಿಕೊಳ್ಳಬೇಕು. ಗೋಷ್ಠಿಗಳಲ್ಲಿಯೂ ಸ್ಥಳೀಯರಿಗೆ ಅವಕಾಶ ನೀಡಬೇಕು. ಎಲ್ಲಾ ತಾಲ್ಲೂಕುಗಳ ಸ್ವಯಂಸೇವಕರು ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎನ್ನಲಾಗಿದೆ. ಸಮ್ಮೇಳನವನ್ನು ಪರಿಸರಸ್ನೇಹಿಯಾಗಿಸಲು ಫ್ಲೆಕ್ಸ್​ಗಳ ಬಳಕೆಯನ್ನು ನಿಷೇಧಿಸಬೇಕೆಂದು ಸೂಚಿಸಲಾಗಿದೆ.

 

Share Post