BengaluruSports

ಎಬಿಡಿ ಭೇಟಿಯಾದ ಕಾಂತಾರ ನಿರ್ದೇಶಕ ರಿಷಬ್‌ ಶೆಟ್ಟಿ

ಬೆಂಗಳೂರು; ರಿಷಬ್‌ ಶೆಟ್ಟಿ ನಿರ್ದೇಶನದ ಕಾಂತಾರಾ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ, ಇತ್ತ ಕ್ರಿಕೆಟಿಗ ಎ.ಬಿ.ಡಿವಿಲಿಯರ್ಸ್‌ ಕೂಡಾ ಕಾಂತಾರಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ನಡುವೆ ಎ.ಬಿ.ಡಿವಿಲಿಯರ್ಸ್‌ ಅವರನ್ನು ನಿರ್ದೇಶಕ ರಿಷಬ್‌ ಶೆಟ್ಟಿ ಭೇಟಿಯಾಗಿದ್ದಾರೆ.

360 ಡಿಗ್ರಿ ಬ್ಯಾಟರ್ ಖ್ಯಾತಿಯ ಎ.ಬಿ.ಡಿವಿಲಿಯರ್ಸ್ ಅವರನ್ನು ಭೇಟಿಯಾಗಿದ್ದರ ಬಗ್ಗೆ ರಿಷಬ್‌ ಶೆಟ್ಟಿ ಹೇಳಿಕೊಂಡಿದ್ದಾರೆ. ರಿಯಲ್ 360 ಸೂಪರ್‌ಹೀರೊ ಎಬಿಡಿ ಅವರನ್ನು ಭೇಟಿಯಾಗಿದ್ದೆ. ಅವರು ನಮ್ಮ ಬೆಂಗಳೂರಿಗೆ ಮರಳಿ ಬಂದಿದ್ದಾರೆ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ರಿಷಬ್‌ ಶೆಟ್ಟಿ ವಿಡಿಯೊ ಹಂಚಿಕೊಂಡಿದ್ದಾರೆ. ಕಳೆದ ನವೆಂಬರ್‌ನಲ್ಲಿ ಎಬಿ ಡಿವಿಲಿಯರ್ಸ್ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

 

Share Post