ಭಾರತಕ್ಕೆ ನೆಹರೂ, ಕರ್ನಾಟಕಕ್ಕೆ ದೇವೇಗೌಡ ಕುಟುಂಬವಾದದ ಪಿತಾಮಹ; ಬಿಜೆಪಿ
ಬೆಂಗಳೂರು; ಭಾರತಕ್ಕೆ ನೆಹರೂ, ಕರ್ನಾಟಕಕ್ಕೆ ದೇವೇಗೌಡರೇ ಕುಟುಂಬವಾದದ ಪಿತಾಮಹ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ. ರಾಜ್ಯ ಬಿಜೆಪಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಲಾಗಿದ್ದು, ಅದ್ರಲ್ಲಿ ಕುಟುಂಬ ರಾಜಕಾರಣದ ಬಗ್ಗೆ ಕಿಡಿಕಾರಲಾಗಿದೆ. ಜನತಾ ಪರಿವಾರ ಎಂದರೆ ಈಗ ದೇವೇಗೌಡ & ಸನ್ಸ್ ಪ್ರೈವೇಟ್ ಲಿಮಿಟೆಡ್ ಎಂಬಂತಾಗಿದೆ. ಭಾರತಕ್ಕೆ ನೆಹರು ಅವರು ಕುಟುಂಬವಾದದ ಪಿತಾಮಹರಾದರೆ, ಕರ್ನಾಟಕಕ್ಕೆ ದೇವೇಗೌಡರೇ ಕುಟುಂಬವಾದದ ಆದ್ಯ ಪಿತಾಮಹ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬಹುದೊಡ್ಡ ಫಲಾನುಭವಿ ಎಂದು ಬಿಜೆಪಿ ತನ್ನ ಟ್ವೀಟ್ನಲ್ಲಿ ಲೇವಡಿ ಮಾಡಿದೆ.
ಜೆಡಿಎಸ್ ನಾಯಕರು 123 ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಗುರಿ ಹೊಂದಿದ್ದೇವೆ ಎಂದು ಬೀಗುತ್ತಿದ್ದಾರೆ. ಆದ್ರೆ ಹೆಚ್ಡಿಕೆಯವೇ ಕಣಕ್ಕಿಳಿಸಲು 123 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಸಿಗುತ್ತಾರಾ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಕುಮಾರಸ್ವಾಮಿ ಅವರೇ, ನಿಮ್ಮ ಪಂಚರತ್ನ ಕಾರ್ಯಕ್ರಮಕ್ಕೆ ಶುಭವಾಗಲಿ. ಆದರೆ ಜೆಡಿಎಸ್ ಪಕ್ಷದ ಪಂಚರತ್ನ ಎಂದರೆ ಜನ ಬೇರೆಯದೇ ಮಾತನಾಡುತ್ತಾರೆ. 1) ದೇವೇಗೌಡ 2) ರೇವಣ್ಣ 3) ಕುಮಾರಸ್ವಾಮಿ 4) ಪ್ರಜ್ವಲ್ ರೇವಣ್ಣ 5) ನಿಖಿಲ್ ಕುಮಾರಸ್ವಾಮಿ ಇವರೇ ಜೆಡಿಎಸ್ ಪಂಚರತ್ನಗಳು. ಐದು ಕ್ಷೇತ್ರದ ಗೆಲುವೇ ಪಂಚರತ್ನ ಯೋಜನೆಯೇ ಎಂದು ಬಿಜೆಪಿ ಲೇವಡಿ ಮಾಡಿದೆ. ಜೆಡಿಎಸ್ ಪಕ್ಷ ಹೇಳಿಕೊಳ್ಳುತ್ತಿರುವ ಮಿಷನ್ 123 ವಾಸ್ತವದಲ್ಲಿ ಮಿಷನ್ 123 ಅಲ್ಲ, ಅದು ಮಿಷನ್ 1+2+3!
1) ದೇವೇಗೌಡ
2) ಕುಮಾರ ಸ್ವಾಮಿ, ರೇವಣ್ಣ
3) ಅನಿತಾ, ಪ್ರಜ್ವಲ್, ಸೂರಜ್
1+2+3=6, ಅಂದರೆ ದೇವೇಗೌಡ ಕುಟುಂಬದ ಗೆಲುವೇ ಪಕ್ಷದ ಗೆಲುವೇ? ಇದು ಕುಟುಂಬವಾದ ಅಲ್ಲದೆ ಮತ್ತೇನು? ಬಿಜೆಪಿ ಪ್ರಶ್ನೆ ಮಾಡಿದೆ.