Bengaluru

ಸೆಪ್ಟೆಂಬರ್‌ 29ಕ್ಕೆ ಕರ್ನಾಟಕ ಬಂದ್‌ ಫಿಕ್ಸ್‌; ವಾಟಾಳ್‌ ನಾಗರಾಜ್‌ ಘೋಷಣೆ

ಬೆಂಗಳೂರು; ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಸೆಪ್ಟೆಂಬರ್‌ 29ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಹೋರಾಟದ ನೇತೃತ್ವ ವಹಿಸಿರುವ ವಾಟಾಳ್‌ ನಾಗರಾಜ್‌ ಇದನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ಸೇರಿದಂದ ರಾಜ್ಯದ ಎಲ್ಲಾ ನೀರಾವರಿ ವಿವಾದಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ಬಂದ್‌ ನಡೆಸಲಾಗುತ್ತದೆ ಎಂದಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ, ಮಹದಾಯಿ ಯೋಜನೆ, ಕೃಷ್ಣಾ ನದಿ ಯೋಜನೆ ಸೇರಿ ಎಲ್ಲಾ ಯೋಜನೆಗಳ ಸಮಸ್ಯೆಯನ್ನು ಬಗೆ ಹರಿಸುವಂತೆ ಒತ್ತಾಯಿಸಲಾಗುವುದು. ಅಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದೆಂದು ವಾಟಾಳ್‌ ನಾಗರಾಜ್‌ ತಿಳಿಸಿದ್ದಾರೆ.

Share Post