Bengaluru

ನಾಳೆ ಕರ್ನಾಟಕ ಬಂದ್‌; ಶಾಲೆಗಳು ಇರುತ್ತವಾ, ಇರಲ್ವಾ..?

ಬೆಂಗಳೂರು; ಕಾವೇರಿಗಾಗಿ ನಾಳೆ ಇಡೀ ಕರ್ನಾಟಕ ಬಂದ್‌ ಮಾಡಲಾಗುತ್ತಿದೆ. ಕನ್ನಡ ಚಳವಳಿ ವಾಟಾಳ್‌ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌ ಅವರ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದ್ದು, ಬಂದ್‌ಗೆ ನೂರಾರು ಸಂಘಟನೆಗಳು ಬೆಂಬಲ ಸೂಚಿಸಿವೆ. ಈ ಹಿನ್ನೆಲೆಯಲ್ಲಿ ನಾಳೆ ಇಡೀ ಕರ್ನಾಟಕ ಬಂದ್‌ ಆಗುವುದು ನಿಶ್ಚಿತ. ಆದ್ರೆ, ನಾಳೆ ಶಾಲೆಗಳು ಇರುತ್ತವಾ..? ಇರಲ್ವಾ ಎಂಬುದರ ಬಗ್ಗೆ ಗೊಂದಲ ಇದೆ. ಈ ನಡುವೆ ಶಿಕ್ಷಣ ಇಲಾಖೆ , ನಾಳೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವುದರ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ನೀಡಿದೆ.

ಶಿಕ್ಷಣ ಇಲಾಖೆಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಬದಲಾಗಿ, ಆಯಾ ಜಿಲ್ಲೆಗಳಲ್ಲಿನ ಪರಿಸ್ಥಿತಿಯನ್ನು ನೋಡಿಕೊಂಡು ಜಿಲ್ಲಾಧಿಕಾರಿಗಳು ರಜೆ ಕೊಡಬೇಕೆ, ಬೇಡವೇ ಎಂಬುದರ ತೀರ್ಮಾನ ಮಾಡಬಹುದು. ಈ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮೌಖಿಕವಾಗಿ ಆದೇಶ ನೀಡಲಾಗಿದೆ. ಇನ್ನೊಂದೆಡೆ ಖಾಸಗಿ ಶಾಲೆಗಳ ಒಕ್ಕೂಟ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಆದ್ರೆ ರಜೆ ನೀಡುವ ತೀರ್ಮಾನವನ್ನು ಆಯಾ ಶಾಲೆಗಳ ಆಡಳಿತ ಮಂಡಳಿಗಳಿಗೆ ಬಿಡಲಾಗಿದೆ.

ಹೀಗಾಗಿ ಪರಿಸ್ಥಿತಿಗೆ ಅನುಗುಣವಾಗಿ ಶಾಲೆಗಳಿಗೆ ರಜೆ ನೀಡಲಾಗುತ್ತದೆ. ಬಹುತೇಕ ಎಲ್ಲಾ ಕಡೆ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುವ ನಿರೀಕ್ಷೆ ಇದೆ. ಹಳೇ ಮೈಸೂರು ಭಾಗದಲ್ಲಂತೂ ಎಲ್ಲವೂ ಸ್ತಬ್ಧವಾಗೋದು ನಿಶ್ಚಿತ. ಹೀಗಾಗಿ ಈ ಭಾಗದಲ್ಲಿ ಬಹುತೇಕ ಶಾಲಾ-ಕಾಲೇಜುಗಳು ಬಂದ್‌ ಆಗುವ ಸಾಧ್ಯತೆ ಇದೆ.

 

Share Post