ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು; ನಾಳೆ ಮುಸ್ಲಿಂ ವ್ಯಾಪಾರಿಗಳಿಂದ ವಹಿವಾಟು ಬಂದ್
ಬೆಂಗಳೂರು: ಹಿಜಾಬ್ ವಿಚಾರವಾಗಿ ಹೈಕೋರ್ಟ್ ನೀಡಿರುವ ತೀರ್ಪಿನಿಂದ ಮುಸ್ಲಿಂ ಸಂಘಟನೆಗಳು ಅಸಮಾಧಾನಗೊಂಡಿವೆ. ಈ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯ ಮುಖಂಡರು ನಾಳೆ ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ಮುಸ್ಲಿಂ ಮುಖಂಡರು ಸ್ವಯಂಪ್ರೇರಿತ ಬಂದ್ ಘೋಷಣೆ ಮಾಡಿದ್ದಾರೆ. ನಾಳೆ ರಾಜ್ಯಾದ್ಯಂತ ವ್ಯಾಪಾರ ವಹಿವಾಟು ಬಂದ್ ಮಾಡಲು ಸೂಚನೆ ನೀಡಿದ್ದಾರೆ.
ನಾಳೆ ಮುಸ್ಲಿಂ ಸಮುದಾಯದವರು ನಡೆಸುತ್ತಿರುವ ವ್ಯಾಪಾರ ವಹಿವಾಟು ನಡೆಸದೆ ಬಂದ್ ಮಾಡಲು ಧರ್ಮಗುರುಗಳ ಸಭೆಯಲ್ಲಿ ಮುಖಂಡ ಸಗೀರ್ ಅಹ್ಮದ್ ಘೋಷಣೆ ಮಾಡಿದ್ದಾರೆ. ಯಾರ ಮೇಲೂ ಒತ್ತಾಯ ಹೇರಿ ಬಂದ್ ನಡೆಸದಿರುವಂತೆ ಸೂಷಿಸಲಾಗಿದೆ.