BengaluruPolitics

Karnataka Election; ಮಗುವಿನ ಜೊತೆ ಕರ್ತವ್ಯಕ್ಕೆ ಹಾಜರಾದ ಮಹಿಳಾ ಅಧಿಕಾರಿ

ಬೆಂಗಳೂರು; ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೌಂಟ್‌ ಡೌನ್‌ ಶುರುವಾಗಿದೆ. ನಾಳೆ ಬೆಳಗ್ಗೆಯಿಂದ ಮತದಾನ ಶುರುವಾಗಲಿದೆ. ಹೀಗಾಗಿ ಇಂದು ಸಂಜೆಯೇ ಚುನಾವಣಾ ಸಿಬ್ಬಂದಿ ಮತಗಟ್ಟೆಗಳಿಗೆ ತೆರಳಬೇಕು. ಹೀಗಾಗಿ ನಿಯೋಜಿಸಿದ ಮತಗಟ್ಟೆಗಳಿಗೆ ಯಂತ್ರಗಳೊಂದಿಗೆ ತೆರಳಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಈ ವೇಳೆ ಮಹಿಳಾ ಅಧಿಕಾರಿಯೊಬ್ಬರು ಪುಟ್ಟ ಮಗುವಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿರುವುದು ಗಮನ ಸೆಳೆಯಿತು.

ಮಹಿಳಾ ಅಧಿಕಾರಿಯನ್ನು ಬೆಂಗಳೂರಿನ ಮಲ್ಲೇಶ್ವರಂ ಮತಗಟ್ಟೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಅವರು ತಮ್ಮ ಪುಟ್ಟ ಮಗುವಿನೊಂದಿಗೆ ಕರ್ತವ್ಯಕ್ಕೆ ಆಗಮಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 8,802 ಮತಗಟ್ಟೆಗಳಿವೆ. ಇದಕ್ಕಾಗಿ ಒಟ್ಟು 42,000 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಚುಣಾವಣೆಗೆ ನಿಯೋಜಿಸಲಾದ ಸಿಬ್ಬಂದಿ ಮಸ್ಟರಿಂಗ್ ಸೆಂಟರ್‌ಗಳಲ್ಲಿ ಇವಿಎಂಗಳನ್ನು ಪಡೆಯಬೇಕು. ಅನಂತರ ತಮಗೆ ಮೀಸಲಾದ ಬಸ್‌ನಲ್ಲಿ ಇಂದು ಸಂಜೆ ವೇಳೆಗೆ ಮತಗಟ್ಟೆಗೆ ತೆರಳುತ್ತಾರೆ.

Share Post