BengaluruEconomy

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಚೊಂಬು ಸಿಕ್ಕಿದೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಪ್ರಧಾನಿ ಹುದ್ದೆ ಉಳಿಸಿಕೊಳ್ಳಲು ಆಂಧ್ರ ಪ್ರದೇಶ ಹಾಗೂ ಬಿಹಾರಕಕ್ಕೆ ವಿಶೇಷ ಅನುದಾನ ನೀಡಿದ್ದಾರೆ.. ಆದ್ರೆ, ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶದ ಮಾತುಗಳನ್ನಾಡಿದ್ದಾರೆ.. ಕೇಂದ್ರ ಬಜೆಟ್‌ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಕರ್ನಾಟಕಕ್ಕೆ ಸೂಕ್ತ ಅನುದಾನ ನೀಡದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ..
ಈ ಸಾಲಿನಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಬರೋಬ್ಬರಿ 48 ಲಕ್ಷದ 21 ಸಾವಿರ ಕೋಟಿ ಗಾತ್ರದ ಬಜೆಟ್‌ ಘೋಷಣೆ ಮಾಡಿದ್ದು, ಇದರಲ್ಲಿ ಕರ್ನಾಟಕ ರಾಜ್ಯಕ್ಕೆ ಏನೇನೂ ಸಿಕ್ಕಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.. ಮೋದಿ ಸರ್ಕಾರ ಉಳಿಯಬೇಕು ಅಂದ್ರೆ ಚಂದ್ರಬಾಬು ನಾಯ್ಡು ಹಾಗೂ ನಿತೀಶ್‌ ಕುಮಾರ್‌ ಬೆಂಬಲ ಬೇಕೇಬೇಕು.. ಹೀಗಾಗಿ ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿ ಅವರಿಗೆ ವಿಶೇಷ ಅನುದಾನ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು..
ಕೇಂದ್ರ ಬಜೆಟ್‌ ಪೂರ್ವಭಾವಿ ಸಭೆಗೆ ನಮ್ಮ ಪರವಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೋಗಿದ್ದರು.. ರಾಜ್ಯಕ್ಕೆ ವಿಶೇಷ ಅನುದಾನ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು.. ರಾಜ್ಯದಿಂದ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯಕ್ಕೆ ಕೊಡುಗೆ ನೀಡುತ್ತಾರೆ ಎಂಬ ನಂಬಿಕೆ ಇತ್ತು.. ಆದ್ರೆ ಅದು ಹುಸಿ ಮಾಡಿದ್ದಾರೆ ಎಂದು ಸಿಎಂ ಇದೇ ವೇಳೆ ಹೇಳಿದ್ದಾರೆ.. ಪೆರಿಪೆರಲ್ ರಸ್ತೆಗೆ ಅನುದಾನ, ಭದ್ರಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ, ವಸತಿ ಯೋಜನೆಗೆ 5 ಲಕ್ಷ ಕೋಟಿ ಬಿಡುಗಡೆ ಮಾಡಬೇಕು ನಾವು ಮನವಿ ಮಾಡಿದ್ದೆವು. ಆದ್ರೆ ಏನನ್ನೂ ಕೊಟ್ಟಿಲ್ಲ ಎಂದು ಸಿಎಂ ಇದೇ ವೇಳೆ ಹೇಳಿದ್ದಾರೆ..

Share Post