ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ; ಜನವರಿಯಿಂದಲೇ ಪೂರ್ವಾನ್ವಯ
ಬೆಂಗಳೂರು: ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಮೂಲವೇತನದ ಶೇಕಡಾ 2.75ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಲು ತೀರ್ಮಾನಿಸಿದೆ. ಜನವರಿ 1 ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1,447 ಕೋಟಿ ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.