ಕರ್ನಾಟಕ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಆಪ್‌ಗೂ ಸೈಬರ್ ದಾಳಿ
ಬೆಂಗಳೂರು; ನ್ಯಾಯಾಂಗ ವ್ಯವಸ್ಥೆ ಕೂಡಾ ಡಿಜಿಟಲ್ ಆಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕವೂ ವಿಚಾರಣೆ ನಡೆಯುತ್ತದೆ. ಹೀಗಾಗಿ ಕರ್ನಾಟಕ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಗಾಗಿ ಒಂದು ಮೊಬೈಲ್ ಆಪ್ ಇದೆ. ಅದಕ್ಕೂ ಹ್ಯಾಕರ್ಸ್ ಕನ್ನ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಆಪ್‌ನಲ್ಲಿ ಅಶ್ಲೀಲ ದೃಶ್ಯಗಳನ್ನು ಅಪ್‌ಲೋಡ್ ಮಾಡಲಾಗಿದೆ. ಈ ಕಾರಣದಿಂದ ತಾತ್ಕಾಲಿಕವಾಗಿ ಹೈಕೋರ್ಟ್ನ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಸ್ಥಗಿತಗೊಳಿಸಲಾಗಿದೆ.