BengaluruPolitics

ಬಿ.ಎಲ್‌.ಸಂತೋಷ್‌ ಮಾತುಗಳು ಯತ್ನಾಳ್‌ ಬಾಯಿಂದ ಬರ್ತಿವೆ; ಕಾಂಗ್ರೆಸ್‌ ಟ್ವೀಟ್‌

ಬೆಂಗಳೂರು; ‘ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬಸನಗೌಡ ಪಾಟೀಲ್‌ ಯತ್ನಾಳ್ ಆಡುವ ಮಾತುಗಳು ಬಿ.ಎಲ್‌.ಸಂತೋಷ್ ಅವರದ್ದು, ಬಾಯಿ ಮಾತ್ರ ಯತ್ನಾಳ್‌ ಅವರದ್ದು’ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್‌ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸರಣಿ ಟ್ವೀಟ್‌ ಮಾಡಲಾಗಿದ್ದು, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ. 

ಕಾಂಗ್ರೆಸ್‌ ಟ್ವೀಟ್‌ಗಳಲ್ಲೇನಿದೆ..?

ಟ್ವೀಟ್‌-೧

ʻಕಾಂಗ್ರೆಸ್‌ ಕಿಟಕಿ ಇಣುಕುವುದರಲ್ಲೇ ನಿರತರಾಗಿದ್ದ ಬಿಜೆಪಿಗೆ ತಮ್ಮಲ್ಲಿನ ಬಿಜೆಪಿ Vs ಬಿಜೆಪಿ ಕದನದಲ್ಲಿ ಬಿಜೆಪಿಗರೆಲ್ಲ ಈಗ ಹಾವಾಡಿಗರಾಗಿದ್ದಾರೆ. ಅವರ ಹಾವುಗಳು ಎಲ್ಲೆಲ್ಲಿರುತ್ತವೆ, ಎಲ್ಲೆಲ್ಲಿ ಹೆಡೆ ಎತ್ತುತ್ತವೆ ಎಂಬುದು ಸ್ವತಃ ಬಿಜೆಪಿಗೇ ತಿಳಿಯುತ್ತಿಲ್ಲ. ಯತ್ನಾಳರ ಹಾವು ಯಾವುದು? ಭ್ರಷ್ಟಾಚಾರದ ಹಾವೇ? ಸಿ.ಡಿ ಹಾವೇ?’

ಟ್ವೀಟ್‌-೨

‘ಶಿಸ್ತಿನ ಪಕ್ಷ ಎಂದುಕೊಳ್ಳುವ ಬಿಜೆಪಿಗೆ ಯತ್ನಾಳ್‌ ಒಬ್ಬರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಸಾಧ್ಯವಾಗಿಲ್ಲ ಎಂದಾದರೆ ಬಿಜೆಪಿಯ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ ಮೀಸಲು ಎಂಬುದು ಸ್ಪಷ್ಟ’

ಹೀಗಂತ ಕಾಂಗ್ರೆಸ್‌ ಲೇವಡಿ ಮಾಡಿ ಸರಣಿ ಟ್ವೀಟ್‌ ಮಾಡಿದೆ.

Share Post