Bengaluru

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ನಾಳೆಯಿಂದ ಭಾರಿ ಮಳೆ ಸಾಧ್ಯತೆ

ಬೆಂಗಳೂರು; ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾಗಿದ್ದು, ಬೆಂಗಳೂರು ಸೇರಿ ರಾಜ್ಯದ ಹಲವಡೆ ನಾಳೆಯಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಕರಾವಳಿ, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ನಾಳೆಯಿಂದ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿದೆ.

ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಉಡುಪಿ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುತ್ತದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಈ ಜಿಲ್ಲೆಗಳ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕರಾವಳಿ ಪ್ರದೇಶದ ಜನರಿಗೂ ಎಚ್ಚರಿಕೆ ನೀಡಲಾಗಿದ್ದು, ಆದಷ್ಟು ಕಡಲ ತೀರಕ್ಕೆ ಹೋಗದಂತೆ ಸೂಚನೆ ನೀಡಲಾಗಿದೆ.

Share Post