Bengaluru

ರಾಜ್ಯದಲ್ಲಿ ಮೋಡ ಕವಿದ ವಾತಾವರಣ:ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬೆಂಗಳೂರು, ಉತ್ತರ ಕರ್ನಾಟಕದ ಕೆಲವು ಭಾಗ, ಕೋಲಾರದಲ್ಲಿ ಮೋಡ ಕವಿದ ವಾತಾವರಣವಿದ್ದು ಮಳೆ ಬರುವ ಸಂಭವವಿದೆ. ಈಗಾಗಲೇ ಚುಮುಚುಮು ಚಳಿಗೆ ಹೈರಾಣಾಗುತ್ತಿರುವ ಜನರಿಗೆ ಮಳೆಯೂ ಕಾಟ ಕೊಡಲಿದೆ. ಕಳೆದ ವಾರಕ್ಕಿಂತ ಈ ವಾರ ಚಳಿಯ ಪ್ರಮಾಣ ಕಡಿಮೆ ಇದೆ ಎಂದು ವರದಿಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಟ 27 ಮತ್ತು ಕನಿಷ್ಟ 17 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

Share Post