Bengaluru

ಸಿಇಟಿ ಪರೀಕ್ಷೆಗೂ ಹಿಜಾಬ್‌ಗೆ ಅವಕಾಶವಿಲ್ಲ; ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ

ಬೆಂಗಳೂರು; ಎಸ್‌ಎಸ್‌ಎಲ್‌ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆಯಂತೆ ಸಿಇಟಿ ಪರೀಕ್ಷೆಗೂ ಹಿಜಾಬ್‌ಗೆ ಅವಕಾಶವಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.  ಎಸ್‌ಎಸ್‌ಎಲ್‌ಸಿ ಮತ್ತು ದ್ವೀತಿಯ ಪಿಯುಸಿಗೆ ಅನ್ವಯವಾಗುವ ನಿಯಮಗಳೇ ಸಿಇಟಿ ಪರೀಕ್ಷೆಗೂ ಅನ್ವಯವಾಗಲಿದೆ ಎಂದು ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆಂದು ವರದಿಯಾಗಿದೆ.

ಜೂನ್ 16, 17 ಹಾಗೂ 18 ರಂದು ಈ ವರ್ಷದ ಸಿಇಟಿ ಪರೀಕ್ಷೆಗಳು ನಡೆಯಲಿದ್ದು, ಇದಕ್ಕೆ ಸಿದ್ಧತೆಗಳು ನಡೆಯುತ್ತಿವೆ.  ಹೈಕೋರ್ಟ್ ಆದೇಶ ಪಾಲನೆ ಮಾಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಹೀಗಾಗಿ ಸಿಇಟಿ ಪರೀಕ್ಷೆಗೆ ಕೂಡಾ ವಿದ್ಯಾರ್ಥಿಗಳು ಹಿಜಾಬ್‌ ಸೇರಿದಂತೆ ಯಾವುದೇ ಧಾರ್ಮಿಕ ಕುರುಹುಗಳನ್ನು ಧರಿಸಬಾರದೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಪರೀಕ್ಷಾ ಕೇಂದ್ರಗಳಿಗೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ವಾಚ್ ನಿಷೇಧ (ಕೈ ಗಡಿಯಾರ) ಮಾಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಆಭರಣಗಳನ್ನು ಧರಿಸುವುದಕ್ಕೂ ನಿಷೇಧ ಹಾಕಲಾಗಿದೆ.

Share Post