ಬೆಂಗಳೂರು ನಗರದಲ್ಲಿ ಕೆಜಿಎಫ್ ಬಾಬುಗೆ ಸೋಲು
ಬೆಂಗಳೂರು: ಬೆಂಗಳೂರು ನಗರ ವಿಧಾನಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋಪಿನಾಥ್ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರು ನಗರ ವಿಧಾನಪರಿಷತ್ ಕ್ಷೇತ್ರ ಬಹಳ ಜಿದ್ದಾಜಿದ್ದಿನ ಕ್ಷೇತ್ರವಾಗಿತ್ತು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಅಲಿಯಾಸ್ ಕೆಜಿಎಫ್ ಬಾಬು ಸ್ಪರ್ಧಿಸಿದ್ದರು.
ಬೆಂಗಳೂರು ನಗರ ಕ್ಷೇತ್ರದಲ್ಲಿ ಕೋಟ್ಯಂತರ ರೂಪಾಯಿ ಹಣ ಹಾರಿದಾಡಿತ್ತು. ಮತದಾರರಿಗೆ ಲಕ್ಷ ಲಕ್ಷ ಹಣ ಹಂಚಲಾಗಿತ್ತೆಂಬ ಆರೋಪಗಳು ಕೇಳಿಬಂದಿದ್ದವು. ಇನ್ನು ಚುನಾವಣೆ ವೇಳೆ ಕೆಜಿಎಫ್ ಬಾಬು ವಿರುದ್ಧ ಹಲವು ಆರೋಪಗಳು ಕೇಳಿಬಂದಿದ್ದವು. ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಕೆಜಿಎಫ್ ಬಾಬು, ಗೆದ್ದೇ ಗೆಲ್ಲಬೇಕು ಎಂದು ಪಣ ತೊಟ್ಟಿದ್ದರು. ಆದ್ರೆ ಇದೀಗ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.