Bengaluru

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021: ಸಚಿವ ನಾರಾಯಣಗೌಡ ಚಾಲನೆ

ಬೆಂಗಳೂರು: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಕ್ರೀಡಾಕೂಟದ ಬ್ಯಾಸ್ಕೆಟ್ ಬಾಲ್ ಲೀಗ್ ಪಂದ್ಯಗಳಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು.

ಕಂಠೀರವ ಕ್ರೀಡಾಂಗಣದಲ್ಲಿ ಬ್ಯಾಸ್ಕೆಟ್ ಬಾಲ್ ಲೀಗ್ ಪಂದ್ಯಗಳಿಗೆ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು. ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ನಲ್ಲಿ ಭಾಗವಹಿಸಲು ದೇಶದ ವಿವಿಧ ವಿಶ್ವವಿದ್ಯಾಲಯಗಳಿಂದ ಸುಮಾರು 36 ಬ್ಯಾಸ್ಕೆಟ್ ಬಾಲ್ ತಂಡಗಳು ಆಗಮಿಸಿದ್ದು, ಲೀಗ್ ಪಂದ್ಯಗಳು ಆರಂಭವಾಗಿವೆ. ಕರ್ನಾಟಕ ಬ್ಯಾಸ್ಕೆಟ್ ಬಾಲ್ ಅಸೋಸಿಯೇಷನ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು , ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು

Share Post