ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್–2 ಉದ್ಘಾಟಿಸಿದ ಪ್ರಧಾನಿ ಮೋದಿ
ಬೆಂಗಳೂರು; ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಮೇಖ್ರಿ ಸರ್ಕಲ್ ವೃತ್ತದ ಎಎಫ್‌ಟಿಟಿಸಿ ಹೆಲಿಪ್ಯಾಡ್‌ನಿಂದ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ ಪ್ರಧಾನಿ ಮೋದಿ, ಸುಸಜ್ಜಿತವಾಗಿ ನಿರ್ಮಾಣವಾಗಿರುವ ಟರ್ಮಿನಲ್–2ಗೆ ಚಾಲನೆ ನೀಡಿದರು. ಅತ್ಯಾಧುನಿಕ ವ್ಯವಸ್ಥೆಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಮೊದಲ ಟರ್ಮಿನಲ್‌ಗಿಂತಲೂ 2ನೇ ಟರ್ಮಿನಲ್ ಅತ್ಯಾಧುನಿಕ ವ್ಯವಸ್ಥೆಗಳನ್ನು ಹೊಂದಿದೆ. ಪ್ರಯಾಣಿಕರಿಗೆ ಪ್ರಕೃತಿ ಸೌಂದರ್ಯದ ಅನುಭವ ನೀಡುವಂತೆ ಟರ್ಮಿನಲ್ 2 ಅನ್ನು ವಿನ್ಯಾಸ ಮಾಡಲಾಗಿದೆ. 2008ರಲ್ಲಿ ಶುರುವಾದ ವಿಮಾನ ನಿಲ್ದಾಣ ದಕ್ಷಿಣ ಭಾರತದ ಅತ್ಯಂತ ದಟ್ಟಣೆ ವಿಮಾನ ನಿಲ್ದಾಣವಾಗಿ ಬೆಳೆದಿದೆ.