Bengaluru

ಕೋಲಾರ, ಧಾರವಾಡ ಹಾಗೂ ತುಮಕೂರಲ್ಲಿ ಕಾಂಗ್ರೆಸ್‌ಗೆ ಮುನ್ನಡೆ

ಬೆಂಗಳೂರು: ಧಾರವಾಡ, ಕೋಲಾರ ಮತ್ತು ಚಿಕ್ಕಬಳ್ಳಾಪುರ ವಿಧಾನಪರಿಷತ್‌ ಕ್ಷೇತ್ರ ಹಾಗೂ ತುಮಕೂರು ಪರಿಷತ್‌ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ತುಮಕೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಜೇಂದ್ರ ರಾಜಣ್ಣ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಸುಮಾರು 300 ಮತಗಳಿಂದ ರಾಜೇಂದ್ರ ರಾಜಣ್ಣ ಮುನ್ನಡೆಯಲ್ಲಿದ್ದು, ಗೆಲುವು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಇನ್ನು ಕೋಲಾರ-ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಂ.ಎಲ್‌.ಅನಿಲ್‌ ಕುಮಾರ್‌ ಮುನ್ನಡೆಯಲ್ಲಿದ್ದಾರೆ. ಧಾರವಾಡದ ದ್ವಿಸದಸ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಲೀಂ ಅಹ್ಮದ್‌ ಮುನ್ನಡೆ ಕಾಯ್ದುಕೊಂಡಿದ್ದಾರೆ.

Share Post