BengaluruHealth

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತಕ್ಕೆ ಬಲಿ

ಚಾಮರಾಜನಗರ; ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ಇಂದು ಬೆಳಗಿನ ಜಾವ ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಧ್ರುವನಾರಾಯಣರಿಗೆ ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್​ಎಂಎಸ್​​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವ ನಾರಾಯಣ ಅವರು ನಂಜನಗೂಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಮತದಾರರನ್ನು ಭೇಟಿ ಮಾಡುವ ಕಾರ್ಯದಲ್ಲಿ ತೊಡಗಿದ್ದರು.
ಇನ್ನು 1983ರಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷ ಸೇರಿದ ಆರ್. ಧ್ರುವನಾರಾಯಣ ಅವರು ಕಾಲಾಂತರದಲ್ಲಿ ಪಕ್ಷದ ಮುಖಂಡನಾಗಿ ಬೆಳೆದರು.

ಚಾಮರಾಜನಗರ ಲೋಕಸಭೆಯನ್ನು ಪ್ರತಿನಿಧಿಸಿ ಎರಡು ಭಾರಿ ಸಂಸದರಾಗಿದ್ದ ಅವರು ಅತ್ಯುತ್ತಮ ಲೋಕಸಭಾ ಸದಸ್ಯರಾಗಿ ಗುರುತಿಸಿಕೊಂಡಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ವಿ.ಶ್ರೀನಿವಾಸ ಪ್ರಸಾದ್ ಅವರ ವಿರುದ್ಧ ಸೋತಿದ್ದರು. 2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಜಯ ಗಳಿಸಿದ್ದರು. 1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧ್ರುವನಾರಾಯಣ್ ಸೋಲಿಸಿದ್ದರು.

2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದರಾಗಿದ್ದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿದ್ದರು. ಚಾಮರಾಜನಗರ ಜಿಲ್ಲೆಯ ರಾಜಕಾರಣದಲ್ಲಿ ಸಹೃದಯಿ, ಮೆಲು ಮಾತಿನ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದರು. . ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಧ್ರುವನಾರಾಯಣ ಮೂಲತಃ ವೃತ್ತಿಯಿಂದ ಕೃಷಿಕರು. 1983ರಲ್ಲಿ ಕಾಂಗ್ರೆಸ್ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶ 1986ರಲ್ಲಿ ಎನ್​ಎಸ್​ಯುಐ ಬೆಂಗಳೂರು​ ಘಟಕದ ಅಧ್ಯಕ್ಷರಾಗಿದ್ದರು.ಈ ಬಾರಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರುಇತ್ತೀಚಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಗುರುತಿಸಿಕೊಂಡು ಓಡಾಡುತ್ತಿದ್ದ ಧೃವನಾರಾಯಣ್‌ ಹೃದಯಾಘಾತಕ್ಕೆ ಬಲಿಯಾಗಿದ್ದು, ಅಪಾರ ಸಂಖ್ಯೆಯ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ.

Share Post