ಉಕ್ರೇನ್‌ನಿಂದ ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ-KSRTC ನಿರ್ಧಾರ
ಬೆಂಗಳೂರು: ಉಕ್ರೇನ್‌ನಲ್ಲಿ ರಷ್ಯಾ ಘೋಷಣೆ ಮಾಡಿರುವ ಯುದ್ಧದಿಂದ ಅಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ದೇಶಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ. ಉಕ್ರೇನ್‌ನಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದ್ದು, ವಿದ್ಯಾರ್ಥಿಗಳು ಪರದಅಡುತ್ತಿದ್ದಾರೆ. ಕೂಡಲೇ ತಮ್ಮನ್ನು ಭಾರತಕ್ಕೆ ಕರೆಸಿಕೊಳ್ಳುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಪರೇಷನ್ ಗಂಗಾ ಕಾರ್ಯಾಚರಣೆಯಲ್ಲಿ ಈಗಾಗಲೇ 1,396ಮಂದಿ ಭಾರತಕ್ಕೆ ಬಂದಿದ್ದಾರೆ. ಉಳಿದವರನ್ನು ಏರ್‌ಲಿಫ್ಟ್ ಮಾಡಲು ಎಲ್ಲಾ ಸಿದ್ಧತೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಉಕ್ರೇನ್‌ನಿಂದ ಬಂದ ರಾಜ್ಯದ ವಿದ್ಯಾರ್ಥಿಗಳಿಗೆ KSRTCಸಂಸ್ಥೆ ಉಚಿತ ಬಸ್ ಸೌಲಭ್ಯ ನೀಡಲು ತೀರ್ಮಾನ ಮಾಡಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಎಂಡಿ ಶಿವಯೊಗಿ ಕಳಸದ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಉಕ್ರೇನ್‌ನಿಂದ ಹಿಂದಿರುಗಿದ ನಮ್ಮ ಜನರು, ವಿಶೇಷವಾಗಿ ವಿದ್ಯಾರ್ಥಿ ಸಮುದಾಯದ ಪರಿಸ್ಥಿತಿಯನ್ನು ಪರಿಗಣಿಸಿ, ಕರ್ನಾಟಕದ ಹತ್ತಿರದ ವಿಮಾನ ನಿಲ್ದಾಣದಿಂದ ರಾಜ್ಯದೊಳಗಿನ ಅವರ ಸ್ಥಳೀಯ ಸ್ಥಳಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣವನ್ನು ನೀಡಲು ನಿರ್ಧರಿಸಲಾಗಿದೆ. ಕರ್ನಾಟಕ ರಾಜ್ಯ ವಿಮಾನ ನಿಲ್ದಾಣದೊಳಗಿನ ಎಲ್ಲಾ ನೋಡಲ್ ಅಧಿಕಾರಿಗಳು ಮತ್ತು ರಸ್ತೆ ಸಾರಿಗೆ ಸಂಸ್ಥೆಯ ಸಂಬಂಧಪಟ್ಟ ವ್ಯಾಪ್ತಿಯ ಅಧಿಕಾರಿಗಳು ಸಮನ್ವಯ ಸಾಧಿಸಿ ಉಚಿತ ಪ್ರಯಾಣವನ್ನು ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಉಕ್ರೇನ್‌ನಿಂದ ಹಿಂದಿರುಗಿದ ನಮ್ಮ ಜನರು, ವಿಶೇಷವಾಗಿ ವಿದ್ಯಾರ್ಥಿ ಸಮುದಾಯದ ಪರಿಸ್ಥಿತಿಯನ್ನು ಪರಿಗಣಿಸಿ, ಕರ್ನಾಟಕದ ಹತ್ತಿರದ ವಿಮಾನ ನಿಲ್ದಾಣದಿಂದ ರಾಜ್ಯದೊಳಗಿನ ಅವರ ಸ್ಥಳೀಯ ಸ್ಥಳಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣವನ್ನು ನೀಡಲು ನಿರ್ಧರಿಸಲಾಗಿದೆ.
(1/2)
— KSRTC (@KSRTC_Journeys) February 28, 2022