BengaluruInternational

ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಪ್ರಶಸ್ತಿ ಸ್ವೀಕರಿಸಿದ ಕೆಎಸ್‌ಆರ್‌ಟಿಸಿ

ಬೆಂಗಳೂರು; 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆಯ್ಕೆಯಾಗಿತ್ತು. ಇಂದು ಕೆಎಸ್‌ಆರ್‌ಟಿಸಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ವರ್ಲ್ಡ್ ಸಟ್ಟೈನಬಿಲಿಟಿ ಕಾಂಗ್ರೆಸ್ ಈ ಪ್ರಶಸ್ತಿ ನೀಡುತ್ತಿದ್ದು, ಇದು 14ನೇ ಆವೃತ್ತಿಯ 18ನೇ ಪ್ರಶಸ್ತಿಯಾಗಿದೆ.

ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಕೆಎಸ್‌ಆರ್‌ಟಿಸಿಗೆ ಪ್ರಶಸ್ತಿ ಲಭಿಸಿದೆ. ವರ್ಲ್ಡ್ ಸಟ್ಟೈನಬಿಲಿಟಿ ಕಾಂಗ್ರೆಸ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಇಂದು ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ನಿಗಮದ ಪರವಾಗಿ ಮುಖ್ಯ ಲೆಕ್ಕಾಧಿಕಾರಿ ಡಾ. ಲತಾ ಟಿ.ಎಸ್​​ ಅವರು ಪ್ರಶಸ್ತಿ ಸ್ವೀಕರಿಸಿದರು.

Share Post