BengaluruCrime

ಎಸ್‌.ಆರ್‌.ವಿಶ್ವನಾಥ್‌ ಹತ್ಯೆಗೆ ಸ್ಕೆಚ್‌: ಆರೋಪಿ ಕುಳ್ಳ ದೇವರಾಜ್‌ ಅರೆಸ್ಟ್‌

ಬೆಂಗಳೂರು: ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಹತ್ಯೆಗೆ ಸ್ಕೆಚ್‌ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕುಳ್ಳ ದೇವರಾಜ್‌ನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿಕೃಷ್ಣ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಎಸ್ಪಿ ವಂಶಿಕೃಷ್ಣ, ಇವತ್ತು ದೂರುದಾರರಿಗೆ ನೋಟಿಸ್‌ ನೀಡಿದ್ದೆವು. ದೂರುದಾರರಾದ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರು, ಠಾಣೆಗೆ ಹಾಜರಾಗಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಿದ್ದಾರೆ. ವಿಡಿಯೋಗಳನ್ನು ನಾವು ಪರಿಶೀಲನೆ ಮಾಡಬೇಕಿದೆ. ಎಫ್‌ಎಸ್‌ಎಲ್‌ ಗೆ ಕಳುಹಿಸಬೇಕಿದೆ. ಎಫ್‌ಎಸ್‌ಎಲ್‌ ವರದಿ ಬಂದ ನಂತರ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಎಸ್ಪಿ ಹೇಳಿದರು.

ಇನ್ನು ಪ್ರಕರಣದ ಎಲ್ಲಾ ಮಾಹಿತಿ ಕೊಡಲು ಸಾಧ್ಯವಿಲ್ಲ. ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ವಂಶಿಕೃಷ್ಣ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

Share Post