ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಉಚ್ಛಾಟನೆಯ ನಕಲಿ ಪತ್ರ ವೈರಲ್
ಬೆಂಗಳೂರು; ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ನಿನ್ನೆಯಷ್ಟೇ ಸಭೆ ನಡೆಸಿ, ನನ್ನದೇ ನಿಜವಾದ ಜೆಡಿಎಸ್. ನಾವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿಲ್ಲ ಎಂದು ಹೇಳಿದ್ದರು. ಇನ್ನು ಇದೇ ಸಭೆಯಲ್ಲಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿಯವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು ಅಂತ ಕೆಲವರು ಆಗ್ರಹ ಮಾಡಿದ್ದರು. ಈ ಬೆನ್ನಲ್ಲೇ ಸಿ.ಎಂ.ಇಬ್ರಾಹಿಂ ಹೆಸರಿನಲ್ಲಿರುವ ಲೆಟರ್‌ಹೆಡ್ ಒಂದು ಹರಿದಾಡುತ್ತಿದೆ. ಅದರಲ್ಲಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿಯವರನ್ನು ಉಚ್ಛಾಟನೆ ಮಾಡಲಾಗಿದೆ ಎಂದು ಬರೆಯಲಾಗಿದೆ. ಆದ್ರೆ ಈ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಸಿ.ಎಂ.ಇಬ್ರಾಹಿ, ಇದು ನಕಲಿ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಯಾರನ್ನೂ ಉಚ್ಛಾಟನೆ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
ಹರಿದಾಡುತ್ತಿರುವ ಪತ್ರದಲ್ಲೇನಿದೆ..?
“ಜೆಡಿಎಸ್ ಪಕ್ಷವು ದಶಕಗಳಿಂದ ಜಾತ್ಯಾತೀತ ಸಿದ್ಧಾಂತವನ್ನು ಪಾಲಿಸುತ್ತಾ ಬಂದಿದೆ. ನಮ್ಮ ಪಕ್ಷದಲ್ಲಿಎಲ್ಲ ಜಾತಿ ಧರ್ಮಗಳ ನಾಯಕರು ಕಾರ್ಯಕರ್ತರು ಪಕ್ಷಕ್ಕಾಗಿ ದುಡಿದಿದ್ದಾರೆ. ಇತ್ತೀಚೆಗೆ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿಯಾಗಿರುವುದು ಕಂಡು ಬಂದಿದ್ದು ಈ ತತ್ ಕ್ಷಣದಿಂದ ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಈ ಕೂಡಲೇ ಪಕ್ಷದಿಂದ ಉಚ್ಚಾಟಿಸಲು ಪಕ್ಷ ತೀರ್ಮಾನಿಸಿದೆ”
ಆದ್ರೆ ಇದು ಸುಳ್ಳು ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೇ ಸ್ಪಷ್ಟನೆ ಕೊಟ್ಟಿದ್ದಾರೆ.