BengaluruPolitics

ಮೊದಲು ಕಾಂಗ್ರೆಸ್‌ ತಮ್ಮ ಕಾಲದ ಹಗರಣಗಳಿಗೆ ಉತ್ತರಿಸಲಿ; ಸಿಎಂ ಬೊಮ್ಮಾಯಿ

ಬೆಂಗಳೂರು; ಇಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜಂಟಿಪತ್ರಿಕಾ ಗೋಷ್ಠಿನಡೆಸಿ ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಇದಕ್ಕೆ ಸಿಎಂ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನವರ ಹಿಂದಿನ ಹಗರಣಗಳ ಬಗ್ಗೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಅವರ ಮೇಲಿರುವ ಆರೋಪಗಳಿಗೆ ಉತ್ತರ ಕೊಡಲಿ. ಅವರ ಕಾಲದಲ್ಲಿ ಆಗಿರುವ ಟೆಂಡರ್ ಹಗರಣಗಳ ಬಗ್ಗೆ ಉತ್ತರ ಕೊಡಲಿ ಎಂದರು.

ಅವರ ಅಜೆಂಡಾ ಅವರೇ ಹೇಳಿಕೊಂಡಿದ್ದಾರೆ. ಶೇ 40 % ಕಮಿಷನ್ ಆರೋಪ ಯಾವುದೂ ನಿರೂಪಿತವಾಗಿಲ್ಲ. ಅವರು ಈ ಬಗ್ಗೆ ಪ್ರಕರಣ ದಾಖಲು ಮಾಡಿದರೆ ತನಿಖೆಯಾಗುತ್ತದೆ. ಅದನ್ನು ಬಿಟ್ಟು ಬರಿ ಗಾಳಿಯಲ್ಲಿ ಗುಂಡು ಹೊಡೆದರೆ ಪ್ರಯೋಜನವಿಲ್ಲ ಎಂದರು. ಇನ್ನು ಗುಳಿಹಟ್ಟಿ ಶೇಖರ್ ಅವರು ನಮಗೆ ಸಾಮಾನ್ಯವಾಗಿ ಪತ್ರ ಬರೆದಿದ್ದಾರೆ. ನಾವು ಅವರಿಗೆ ಪತ್ರ ಮುಖೇನ ನಿರ್ದಿಷ್ಟ ಪ್ರಕರಣವಿದ್ದರೆ ನೀಡಲಿ, ತನಿಖೆ ಮಾಡುತ್ತೇವೆ ಎಂದು ಕೇಳುತ್ತಿದ್ದೇವೆ. ನಿನ್ನೆ ಸದನದಲ್ಲಿಯೂ ಸ್ಪಷ್ಟವಾಗಿ ಕೇಳಿದ್ದೇವೆ. ಯಾವುದಾದರೂ ಅಧಿಕಾರಿ ಯಾವುದೇ ಹಂತದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ ತನಿಖೆ ಮಾಡುತ್ತೇವೆ ಎನ್ನುವುದು ನಮ್ಮ ನಿಲುವಾಗಿದೆ.

ಡಿ.ಕೆ.ಶಿವಕುಮಾರ್ ಅವರು ನೀರಾವರಿ ಸಚಿವರಿದ್ದಾಗ ಟೆಂಡರ್ ಪರಿಶೀಲನಾ ಸಮಿತಿಯನ್ನು ತೆಗೆದುಹಾಕಿದ್ದರು. ಟಿ. ಎ. ಸಿ ಯನ್ನೂ ತೆಗೆದುಹಾಕಿದ್ದರು. ನಿಗಮದಲ್ಲಿ ಎರಡು ಹಂತದ ಪರಿಶೀಲನೆಯನ್ನು ತೆಗೆದವರು ಅವರು, ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡಿದ್ದರು. ನಾವು ಬಂದ ನಂತರ ಅದನ್ನು ಪುನ: ಸ್ಥಾಪನೆ ಮಾಡಿದ್ದೇವೆ. ಹೀಗಾಗಿ ನಮ್ಮನ್ನ ಪ್ರಶ್ನಿಸಲು ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದರು.

Share Post