BengaluruPolitics

3-4 ತಿಂಗಳಲ್ಲಿ ಲೋಕಸಭಾ ಚುನಾವಣೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಸಿದ್ಧತೆ ನಡೆಸುತ್ತಿದೆ. ಇನ್ನು ಮೂರು ನಾಲ್ಕು ತಿಂಗಳಲ್ಲಿ ಲೋಕಸಭಾ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಈಗಾಗಲೇ ವೀಕ್ಷಕರನ್ನು ನೇಮಕ ಮಾಡಲಾಗಿದ್ದು, ಅವರು ಕ್ಷೇತ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದಾರೆ ಎಂದು ಹೇಳಿದರು.

ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ನಾವು ಎಲ್ಲರೂ ಒಟ್ಟಿಗೆ ಇದ್ದೇವೆ. ಎಲ್ಲರೂ ಒಗ್ಗಟ್ಟಾಗಿಯೇ ಲೋಕಸಭಾ ಚುನಾವಣೆಯನ್ನು ಎದುರಿಸುತ್ತೇವೆ. ಈಗಾಗಲೇ ನಮ್ಮ ಹೈಕಮಾಂಡ್‌ ಎಲ್ಲಾ ಕ್ಷೇತ್ರಗಳಿಗೂ ವೀಕ್ಷಕರನ್ನು ನೇಮಕ ಮಾಡಿದೆ. ಅವರು ಅವರ ನೀಡಿದ ಕ್ಷೇತ್ರಗಳಿಗೆ ಹೋಗಿ ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹ ಮಾಡಿದ್ದಾರೆ. ವರದಿ ಕೂಡಾ ಸಿದ್ಧವಾಗಿದೆ. ಆ ವರದಿ ನಮ್ಮ ಕೈಸೇರುತ್ತದೆ. ಜೊತೆಗೆ ಹೈಕಮಾಂಡ್‌ ನಾಯಕರು ಕೂಡಾ ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ. ಅದರ ಆಧಾರದ ಮೇಲೆ ಸಂಭಾವ್ಯರ ಪಟ್ಟಿ ರೆಡಿ ಮಾಡುತ್ತೇವೆ. ಹೈಕಮಾಂಡ್‌ ಅಂತಿಮ ನಿರ್ಧಾರ ಕೈಗೊಳ್ಳುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

 

Share Post