BengaluruCrime

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ಪತ್ತೆ

ಬೆಂಗಳೂರು; ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಹಲವು ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆದಿದ್ದು, ಅಪಾರ ಪ್ರಮಾಣದ ಆಸ್ತಿ, ನಗದು, ಚಿನ್ನಾಭರಣ ಪತ್ತೆಯಾಗಿದೆ. ಬೆಂಗಳೂರು, ಬಾಗಲಕೋಟೆ, ಚಿಕ್ಕಬಳ್ಳಾಪುರ, ವಿಜಯಪುರ, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೋಲಾರ, ತುಮಕೂರು, ಬೆಳಗಾವಿ, ಕೊಡಗು, ರಾಮನಗರ ಸೇರಿದಂತೆ ರಾಜ್ಯಾದ್ಯಂತ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.

ಬಾಗಲಕೋಟೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ್ ಹಾಗೂ ಸಹಾಯಕ ನಿರ್ದೇಶಕ ಕೃಷ್ಣಾ ಶಿರೂರು ಅವರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಚೇತನಾ ಪಾಟೀಲ್ ಅವರ ಮನೆಯಲ್ಲಿ 2 ಸಾಕು ಆಮೆಗಳು ಪತ್ತೆಯಾಗಿವೆ. ಜೊತೆಗೆ ಅಪಾರ ಪ್ರಮಾಣದ ನಗದು ಕೂಡಾ ಪತ್ತೆಯಾಗಿದೆ. ಕೋಲಾರದಲ್ಲೂ ದಾಳಿ ನಡೆದಿದ್ದು, ಅಧಿಕಾರಿಯೊಬ್ಬರ ಮನೆಯಲ್ಲಿ ನಲವತ್ತು ಲಕ್ಷಕ್ಕೂ ಅಧಿಕ ಹಣ ಪತ್ತೆಯಾಗಿದೆ.

Share Post